For the best experience, open
https://m.newskannada.com
on your mobile browser.
Advertisement

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟ ಮಾಡಲಾಗಿದೆ.
01:51 PM May 08, 2024 IST | Chaitra Kulal
ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟ ಮಾಡಲಾಗಿದೆ.

Advertisement

2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೇ ಸಂಪೂರ್ಣವಾಗಿದೆ. ಫಲಿತಾಂಶದ ಸರ್ವ ಸಿದ್ಧತೆ ಮಾಡಿಕೊಂಡಿರುವ ಪರೀಕ್ಷಾ ಮಂಡಳಿ, ನಾಳೆ ಬೆಳಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಟಿ ನಡೆಸುತ್ತಿದೆ.

ಏಪ್ರಿಲ್ 15ರಂದು ಎಸ್ಎಸ್ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭ ವಾಗಿತ್ತು. ಎಸ್ಎಸ್ಎಲ್‌ಸಿ ರಿಸಲ್ಟ್‌ಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯುತ್ತಿದ್ದಾರೆ.

Advertisement

2023-24ನೇ ಸಾಲಿನ ಎಸ್ಎಸ್ಎಲ್‌ಸಿಯಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನಾಳೆ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಆಗುತ್ತಿದೆ. ಎಂದಿನಂತೆ SSLC ರಿಸಲ್ಟ್ ಅನ್ನು ಪರೀಕ್ಷಾ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಿದೆ. http://kseeb.kar.nic.in ಮತ್ತು http://karresults.nic.in ನಲ್ಲಿ ಪರೀಕ್ಷೆಯ ಫಲಿತಾಂಶ ಲಭ್ಯವಿದೆ.

2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-1 ಕಳೆದ ಮಾರ್ಚ್‌ 25 ರಿಂದ ಏಪ್ರಿಲ್ 6, 2024ರವರೆಗೆ ನಡೆದಿತ್ತು. ಪರೀಕ್ಷೆ-1 ಬರೆದಿರುವ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಕೊನೆಗೂ ಕಾಯುವಿಕೆಯ ಸಮಯ ಕೊನೆಯಾಗುತ್ತಿದೆ.

Advertisement
Tags :
Advertisement