ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು : ನ.18ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಮಂಡಳ ನಿಯಮಿತ
03:50 PM Nov 08, 2023 IST | Ramya Bolantoor

ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಮಂಡಳ ನಿಯಮಿತ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ ನೇತೃತ್ವದಲ್ಲಿ,ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ನಿಯಮಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ , ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ ಟ್ರಸ್ಟ್‌ ರಿ, ಮಂಗಳೂರು ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಶನಿವಾರ (ನ.18) ರಂದು ಬೆಳಿಗ್ಗೆ ಸಾರ್ವಜನಿಕ ಖಾಸಗಿ ಸಹಕಾರ ಸಹಭಾಗಿತ್ವವ್ನನು ಬಲಪಡಿಸವುದು ಎಂಬ ವಿಷಯದ ಕುರಿತು 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಕಾರ್ಯಕ್ರಮವು ಮಂಗಳೂರು ಉರ್ವ ಕ್ರಿಕೆಟ್‌ ಮೈದಾನ (ಉರ್ವ ಮಾರ್ಕೆಟ್)‌ ನಡೆಯಲಿದೆ.

Advertisement

ಅಂದು ಬೆಳಿಗ್ಗೆ 9 ಗಂಟೆಗೆ ಸಹಕಾರ ಜಾಥವು ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್‌ ಮೈದಾನದನದವರೆಗೆ ನಡೆಯಲಿದೆ.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ ಫರೀದ್‌ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಸಮಾರಂಭವನ್ನು ಉದ್ಘಾಟನೆಯನ್ನು ಕರ್ನಾಟಕ ಸರಕಾರ ಸಹಕಾರ ಸಚಿವ ಕೆ.ಎನ್.‌ ರಾಜಣ್ಣ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉತ್ತಮ ಸಹಕಾರ ಸಂಘಗಳಗೆ ಪ್ರಶಸ್ತಿ ಪ್ರಧಾನ ಮಾಡಲಿರುವರು. ಮಂಗಳೂರು ಲೋಕಸಭಾ ಕ್ಷೇತ್ರ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ಮಾಡಲಿದ್ದು, ಶಾಸಕ ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ ದೇವೇಗೌಡ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಕರ್ನಾಟಕ  ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಮಂಗಳೂರು ಮೆನೇಜಿಂಗ್‌ ಟ್ರಸ್ಟಿ ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಎಂ.ಎನ್.ರಾಜೇಂದ್ರ ಕುಮಾರ್‌ ವಹಿಸಲಿದ್ದಾರೆ.

Advertisement

ಮೆರವಣಿಗೆ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್‌ ಮಾಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಭರತ್‌ ವೈ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ, ಮಂಗಳೂರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್ ಪಾಲ ಎ. ಸುವರ್ಣ ಇದ್ದಾರೆ.

ವಿಶೇಷ ಅಹ್ವಾನಿತರು:
ಬೆಂಗಳೂರು ಸರಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಬೆಂಗಳೂರು ಸಹಕಾರ ಸಂಘಗಳ ನಿಬಂಧಕ ಡಾ|| ಕೆ. ರಾಜೇಂದ್ರ, ದಕ್ಷಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಎಂ.ಪಿ, ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ಭಾಗಿಯಾಗಲಿದ್ದಾರೆ.

Advertisement
Tags :
KARNATAKALatestNewsNewsKannadaಮಂಗಳೂರು
Advertisement
Next Article