ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
01:32 PM Feb 17, 2024 IST | Ashika S

ಮಣಿಪಾಲ: ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.

Advertisement

ಮಣಿಪಾಲ ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ಬಿಹಾರ ಮೂಲದ ಸತ್ಯಂ ಸುಮನ್ (20) ಮೃತದುರ್ದೈವಿ.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್, ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನಕಲುಪರೀಕ್ಷೆವಿದ್ಯಾರ್ಥಿ
Advertisement
Next Article