For the best experience, open
https://m.newskannada.com
on your mobile browser.
Advertisement

ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
11:42 AM Mar 15, 2024 IST | Gayathri SG
ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಕೋಲಾರ ಮೂಲದ ಸಂಜಯ್ ಭುವನ್ (16) ಮೃತ ದುರ್ದೈವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಮಾ.12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ‌ ಬಂದಿದೆ.

ಈ ಘಟನೆ ತಿಳಿದು NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು. ಸ್ಥಳದಲ್ಲಿ ಬಿಗಿವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ,ಪೊಲೀಸರು ಕಾಲೇಜು ಬಳಿ ಭದ್ರತೆ ಒದಗಿಸಿದ್ದಾರೆ.

Advertisement

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಪೊಲೀಸರಿಗೆ ವಿದ್ಯಾರ್ಥಿ ಸಂಘಟನೆ ಆಗ್ರಹ ಮಾಡಿದೆ.

Advertisement
Tags :
Advertisement