For the best experience, open
https://m.newskannada.com
on your mobile browser.
Advertisement

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ  ಸಮೀಪದ  ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌  ಜಿಗಿದು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ  ನಡೆದಿದೆ.
07:33 PM May 15, 2024 IST | Ashika S
ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ  ಸಮೀಪದ  ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌  ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ.

Advertisement

ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ.

ರಾಹುಲ್ ಮೂಲತಃ ಆಂಧ್ರಪ್ರದೇಶ ಕರ್ನೂಲ್ ಮೂಲದ ದಂಪತಿಗಳ ಕುಟುಂಬದಿಂದ ಬಂದಿದ್ದು, ಕೆಲ ವರ್ಷಗಳಿಂದ ವಿದ್ಯಾಭ್ಯಾಸಕ್ಕಾಗಿ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದ ಎನ್ನಲಾಗುತ್ತಿದೆ.

Advertisement

ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದು, ಈ ಸಮಯದಲ್ಲಿ ಕಾಲೇಜಿಗೆ ತಡವಾಗಿ ಬಂದಿದ್ದ. ಇದೇ ವಿಚಾರವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ನಿಂದಿಸಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
Advertisement