ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ರೀಡಾ ಕೂಟದಲ್ಲಿ ಬಹುಮಾನ ವಂಚಿತಗೊಂಡದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿನಿ ಸಾವು

ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನಡೆದಿದೆ.
11:48 AM Nov 26, 2023 IST | Gayathri SG

ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನಡೆದಿದೆ.

Advertisement

ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ (17) ಮೃತ ಯುವತಿ. ನಿಶಾ ಬಿ ಎಮ್ ರವರು ಪುತ್ತೂರು ನಗರದ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದರು.

Advertisement

ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದಾರೆ. ಈ ಬಗ್ಗೆ ನಿಶಾ ಅವರ ಸಹೋದರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatestNewsNewsKannadaಕ್ರೀಡಾ ಕೂಟಪುತ್ತೂರು
Advertisement
Next Article