For the best experience, open
https://m.newskannada.com
on your mobile browser.
Advertisement

ಅಮೆರಿಕದಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲುಗು ವಿದ್ಯಾರ್ಥಿ ಮೃತಪಟ್ಟಿದ್ದಾರೆ. ತೆಲಂಗಾಣದ ಖಮ್ಮಂ ಮಾಮಿಲಗುಡೆಂ ಪ್ರದೇಶದ ಪುಚ್ಚಾ ವರುಣ್‌ರಾಜ್(29) ಇಂಡಿಯಾನಾ ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದು, ಅರೆಕಾಲಿಕ ಕೆಲಸ ಮಾಡುತ್ತಿದ್ದ. ಅಕ್ಟೋಬರ್ 30 ರಂದು ಅವರು ಜಿಮ್‌ನಿಂದ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದರು. ಪರಿಣಾಮವಾಗಿ, ಅವರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ವರುಣ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
12:42 PM Nov 08, 2023 IST | Ashitha S
ಅಮೆರಿಕದಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲುಗು ವಿದ್ಯಾರ್ಥಿ ಮೃತಪಟ್ಟಿದ್ದಾರೆ. ತೆಲಂಗಾಣದ ಖಮ್ಮಂ ಮಾಮಿಲಗುಡೆಂ ಪ್ರದೇಶದ ಪುಚ್ಚಾ ವರುಣ್‌ರಾಜ್(29) ಇಂಡಿಯಾನಾ ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದು, ಅರೆಕಾಲಿಕ ಕೆಲಸ ಮಾಡುತ್ತಿದ್ದ. ಅಕ್ಟೋಬರ್ 30 ರಂದು ಅವರು ಜಿಮ್‌ನಿಂದ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದರು.

Advertisement

ಪರಿಣಾಮವಾಗಿ, ಅವರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ವರುಣ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

ಕಳೆದ ತಿಂಗಳು 30ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರುಣರಾಜ್ ಒಂಬತ್ತು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ಮೃತಪಟ್ಟರು. ಈ ಬಗ್ಗೆ ಅಮೆರಿಕದ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ವರುಣನ ಮೃತ ದೇಹವನ್ನು ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ.

Advertisement

Advertisement
Tags :
Advertisement