ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಡರಾತ್ರಿವರೆಗೂ ಓದಿಕೊಂಡಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.
09:52 AM Feb 16, 2024 IST | Ashika S

ಮಂಗಳೂರು: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

Advertisement

ಉದ್ಯಮಿ ದಾವುದ್ ಅವರ ಪುತ್ರಿ ಹಫೀಜಾ(17) ಮೃತಪಟ್ಟವರು. ಮನೆಯಲ್ಲಿ ಮಲಗಿದ್ದ ವಿದ್ಯಾರ್ಥಿನಿ ಹಫೀಜಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹಫೀಜಾ ಬುಧವಾರ ತಡರಾತ್ರಿವರೆಗೆ ಓದಿದ್ದಾರೆ. ಗುರುವಾರ ಬೆಳಗ್ಗೆ ಆಕೆ ಏಳದೇ ಇರುವುದನ್ನು ಗಮನಿಸಿದ ಮನೆಯವರು ಎಬ್ಬಿಸಲು ಹೋದಾಗ ಮಲಗಿದಲ್ಲೇ ಮೃತಪಟ್ಟಿರುವುದು ಗೊತ್ತಾಗಿದೆ.

Advertisement

Advertisement
Tags :
LatestNewsNewsKannadaಉಪ್ಪಿನಂಗಡಿವಿದ್ಯಾರ್ಥಿನಿಹೃದಯಾಘಾತ
Advertisement
Next Article