For the best experience, open
https://m.newskannada.com
on your mobile browser.
Advertisement

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಓರ್ವ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ. 
01:24 PM Jan 16, 2024 IST | Gayathri SG
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಓರ್ವ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ.

Advertisement

ಮೃತ ವಿದ್ಯಾರ್ಥಿನಿ ವಿಜಾಪುರ ಗೊಲ್ಲರಹಟ್ಟಿ ಗ್ರಾಮದ 19 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ. ಈಕೆ ಲಾರಿ ಡಿಕ್ಕಿ ಹೊಡೆತಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದು ಅಲ್ಲೇ ಮೃತಪಟ್ಟಿದ್ದಾಳೆ.

ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗಲು 3 ಜನ ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ.  ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Advertisement
Tags :
Advertisement