For the best experience, open
https://m.newskannada.com
on your mobile browser.
Advertisement

ಬೀದರ್‌: ಕಾಲೇಜು ಕಾಂಪೌಂಡ್‌ ತೆರವು, ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಗರದ ನೌಬಾದ್‌ ಸಮೀಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಕಾಂಪೌಂಡ್‌ ಅನ್ನು ಕೆಲವು ಖಾಸಗಿ ವ್ಯಕ್ತಿಗಳು ತೆರವುಗೊಳಿಸಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
09:59 AM Feb 13, 2024 IST | Gayathri SG
ಬೀದರ್‌  ಕಾಲೇಜು ಕಾಂಪೌಂಡ್‌ ತೆರವು  ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೀದರ್‌: ನಗರದ ನೌಬಾದ್‌ ಸಮೀಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಕಾಂಪೌಂಡ್‌ ಅನ್ನು ಕೆಲವು ಖಾಸಗಿ ವ್ಯಕ್ತಿಗಳು ತೆರವುಗೊಳಿಸಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಅನಂತರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನೌಬಾದ್‌ ಸರ್ವೇ ನಂಬರ್‌ 18/2 ಮತ್ತು 18/3 ರಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದೆ. ಶನಿವಾರ ಸಂಜೆ ಕೆಲವು ಕಾಂಪೌಂಡ್‌ ಒಡೆದು, ಅತಿಕ್ರಮಣ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Advertisement
Tags :
Advertisement