For the best experience, open
https://m.newskannada.com
on your mobile browser.
Advertisement

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ. ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆ ಆಗಿವೆ.
08:19 AM May 16, 2024 IST | Nisarga K
49 ಅಭ್ಯರ್ಥಿಗಳಿಂದ ಉಮೇದುವಾರಿಕೆ   ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ. ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆ ಆಗಿವೆ. ಒಟ್ಟು 47 ಪರುಷರು, ಇಬ್ಬರು ಮಹಿಳೆಯರು ಸೇರಿದಂತೆ 49 ಅಭ್ಯರ್ಥಿಗಳು 71 ಉಮೇದುವಾರಿಕೆ ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿಯಿಂದ 4, ಕಾಂಗ್ರೆಸ್‌ನಿಂದ 5, ಜೆಡಿಎಸ್‌ನಿಂದ 1, ಹಾಗೂ 40 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.

Advertisement

ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದ್ದು, ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮೇ 20 ಕೊನೆ ದಿನವಾಗಿದೆ.

Advertisement
Advertisement
Tags :
Advertisement