ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಕ್ಕರೆ ಕಾರ್ಖಾನೆಯ ಹಗರಣ: ಮುಖಂಡ ಸುಪ್ರಸಾದ್ ಶೆಟ್ಟಿ ಸಹಿತ 18 ಮಂದಿಗೆ ಜಾಮೀನು ಅರ್ಜಿ ತಿರಸ್ಕೃತ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸ್ಥಾವರ ಹಾಗೂ ಯಂತ್ರೋಪಕರಣಗಳ ಮಾರಾಟದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಮಹತ್ವದ ಅಂಶವೊಂದು ಹೊರಬಿದ್ದಿದ್ದು, ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಿಗೆ ಉಡುಪಿ ನ್ಯಾಯಾಲಯ ಬಿಗ್‌ ಶಾಕ್ ನೀಡಿದೆ.
08:11 PM Nov 23, 2023 IST | Ashika S

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸ್ಥಾವರ ಹಾಗೂ ಯಂತ್ರೋಪಕರಣಗಳ ಮಾರಾಟದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಮಹತ್ವದ ಅಂಶವೊಂದು ಹೊರಬಿದ್ದಿದ್ದು, ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಿಗೆ ಉಡುಪಿ ನ್ಯಾಯಾಲಯ ಬಿಗ್‌ ಶಾಕ್ ನೀಡಿದೆ.

Advertisement

ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ, ಬಿಜೆಪಿ ಮುಖಂಡ ಬೈಕಾಡಿ ಸುಪ್ರಸಾದ್ ಶೆಟ್ಟಿ ಸಹಿತ 18 ಮಂದಿ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಇಂದು ಆದೇಶ ನೀಡಿದೆ.

ಕಾರ್ಖಾನೆಯ ಅವ್ಯವಹಾರಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಅಕ್ಟೋಬರ್ 21ರಂದು ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಬ್ರಹ್ಮಾವರ ಪೊಲೀಸರಿಗೆ ನಿರ್ದೇಶನ ನೀಡಿತ್ತು.

Advertisement

ಅದರಂತೆ ಸತೀಶ್ ಕಿಣಿ ನೀಡಿದ ಖಾಸಗಿ ದೂರಿನಂತೆ ಅ.25ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಕ್ಕರೆ ಕಾರ್ಖಾನೆಗೆ ಸಂಬಂಧಪಟ್ಟಂತೆ ಒಟ್ಟು 25 ಮಂದಿ ಆರೋಪಿಗಳು ಸೇರಿ 2021ರ ಆ.18ರಿಂದ 2022ರ ಡಿ.5ರ ಮಧ್ಯಾವಧಿಯಲ್ಲಿ ಕಾರ್ಖಾನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್ ಕಮ್ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸಿ, ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಪರಸ್ಪರ ಪಿತೂರಿ ನಡೆಸಿದ್ದರು.

ಕಾನೂನು ಬಾಹಿರ ಟೆಂಡರ್ ಪ್ರಕ್ರಿಯೆಯ ಮೂಲಕ ನಂಬಿಕೆ ದ್ರೋಹ, ದುರುಪಯೋಗ, ವಂಚನೆಯ ಮೂಲಕ ಸುಳ್ಳುತನದಿಂದ ಕಂಪನಿಯ ದಾಖಲೆಗಳನ್ನು ತಯಾರಿಸಿ ಸಕ್ಕರೆ ಕಾರ್ಖಾನೆಯ ಸ್ಕ್ಯಾಪ್‌ಗಳನ್ನು ಮಾರಾಟ ಮಾಡಿ, ರೈತರಿಗೆ ಮತ್ತು ಸರಕಾರಕ್ಕೆ 14 ಕೋಟಿಗಿಂತ ಕಡಿಮೆ ಇಲ್ಲದಷ್ಟು ಹಣವನ್ನು ಭಾರೀ ಆರ್ಥಿಕ ನಷ್ಟವನ್ನು ಉಂಟುಮಾಡಿ ಅಪರಾಧ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಗಳಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಉಮಾನಾಥ್ ಶೆಟ್ಟಿ, ನಿರ್ದೇಶಕರುಗಳಾದ ಆಸ್ತಿಕ ಶಾಸ್ತ್ರಿ, ಸುಬ್ಬ ಬಿಲ್ಲವ, ಸಂತೋಷ್ ಕುಮಾರ್ ಶೆಟ್ಟಿ, ಸನ್ಮತ್ ಹೆಗ್ಡೆ, ರತ್ನಾಕರ ಗಾಣಿಗ, ವಾಸಂತಿ ಆರ್.ಶೆಟ್ಟಿ, ಹೇಮಲತಾ ಯು.ಶೆಟ್ಟಿ, ಗೀತಾ ಶಂಭು ಪೂಜಾರಿ ಹಾಗೂ ಸಿಬ್ಬಂದಿ ಸಹಿತ 18 ಮಂದಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶಾಂತವೀರ ಶಿವಪ್ಪ ಎಲ್ಲ 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಜಯರಾಂ ಶೆಟ್ಟಿ ವಾದಿಸಿದರು.

Advertisement
Tags :
LatetsNewsNewsKannadaಆಡಳಿತ ಮಂಡಳಿಬಹುಕೋಟಿಯಂತ್ರೋಪಕರಣಸಕ್ಕರೆ ಕಾರ್ಖಾನೆಹಗರಣ
Advertisement
Next Article