For the best experience, open
https://m.newskannada.com
on your mobile browser.
Advertisement

ಆತ್ಮಹತ್ಯಾ ಬಾಂಬ್ ದಾಳಿಗೆ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ !

ವಾಯವ್ಯ ಪಾಕಿಸ್ತಾನದಲ್ಲಿಇಂದು ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
04:38 PM Mar 26, 2024 IST | Ashitha S
ಆತ್ಮಹತ್ಯಾ ಬಾಂಬ್ ದಾಳಿಗೆ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ

ಪೇಶಾವರ: ವಾಯವ್ಯ ಪಾಕಿಸ್ತಾನದಲ್ಲಿಇಂದು ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್, ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಅಲಿ ಗಂದಾಪುರ್ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ದಾಳಿಯಲ್ಲಿ ಐವರು ಚೀನಿ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಸಾವಿಗೀಡಾಗಿದ್ದಾನೆ ಎಂದು ಮೊಹಮ್ಮದ್ ಅಲಿ ಗಂಡಾಪುರ್ ಹೇಳಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಾವಲು ಪಡೆಯಲ್ಲಿ ಉಳಿದವರಿಗೆ ರಕ್ಷಣೆ ನೀಡಲಾಗಿದೆ ಎಂದು  ಗಂದಾಪುರ್ ತಿಳಿಸಿದ್ದಾರೆ.

Advertisement

ಇನ್ನು 2021ರಲ್ಲಿ ಬಸ್‌ನಲ್ಲಿ ನಡೆದ ಸ್ಫೋಟದಲ್ಲಿ ಒಂಬತ್ತು ಚೀನಾ ಪ್ರಜೆಗಳು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದರು.ದಾಸು ಜಲವಿದ್ಯುತ್ ಯೋಜನಾ ಸ್ಥಳಕ್ಕೆ ಚೀನಾದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿ ಈ ಘಟನೆ ನಡೆದಿದೆ.

Advertisement
Tags :
Advertisement