For the best experience, open
https://m.newskannada.com
on your mobile browser.
Advertisement

29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಹೈಕೋರ್ಟ್‌ಗೆ ಏ.29 ರಿಂದ ಮೇ 25ರ ವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ.
07:41 PM Apr 27, 2024 IST | Nisarga K
29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಬೆಂಗಳೂರು: ಹೈಕೋರ್ಟ್‌ಗೆ ಏ.29 ರಿಂದ ಮೇ 25ರ ವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ.

Advertisement

ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್‌ ಮೇಲ್ಮನವಿ, ಕ್ರಿಮಿನಲ್‌ ಅರ್ಜಿ, ಸಿವಿಲ್‌ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇಫೈಲಿಂಗ್‌ ಪೋರ್ಟಲ್‌ ಮೂಲಕ ಇ-ಫೈಲಿಂಗ್‌ ಮಾಡಬಹುದಾಗಿದೆ ಎಂದು ರಿಜಿಸ್ಟಾರ್‌ ಎಂ ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ.

Advertisement
Advertisement
Tags :
Advertisement