For the best experience, open
https://m.newskannada.com
on your mobile browser.
Advertisement

ಗಣೇಶನ ಮೂರ್ತಿ ಜೊತೆ 3ನೇ ಬಾರಿ ನಭಕ್ಕೆ ಹಾರಿದ ಸುನೀತಾ ವಿಲಿಯಮ್ಸ್‌

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ಸಿದ್ದರಾಗಿದ್ದು, ಇಂದು ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಲಿದ್ದಾರೆ.
11:05 AM May 07, 2024 IST | Ashitha S
ಗಣೇಶನ ಮೂರ್ತಿ ಜೊತೆ  3ನೇ ಬಾರಿ ನಭಕ್ಕೆ ಹಾರಿದ ಸುನೀತಾ ವಿಲಿಯಮ್ಸ್‌

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ಸಿದ್ದರಾಗಿದ್ದು, ಇಂದು ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಲಿದ್ದಾರೆ.

Advertisement

ಸುನೀತಾ ತಮ್ಮ ಜತೆಗೆ ಗಣೇಶನ ಮೂರ್ತಿಯನ್ನು ಕೊಂಡೊ ಯ್ಯಲಿದ್ದಾರೆ. ಸುದ್ದಿ ವಾಹಿನಿ ಯೊಂದಿಗಿನ ಸಂದರ್ಶನ ದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಧಾರ್ಮಿಕತೆ ಗಿಂತ ಹೆಚ್ಚು ಆಧ್ಯಾತ್ಮಿಕೆ ಯನ್ನು ನಂಬುತ್ತೇನೆ. ಗಣಪತಿ ವಿಗ್ರಹ ನನಗೆ ಅದೃಷ್ಟದ ಸಂಕೇತ. ಇದನ್ನು ಈ ಬಾರಿ ನನ್ನೊಂದಿಗೆ ಕೊಂಡೊಯ್ಯುತ್ತಿದ್ದೇನೆ. ಹಿಂದಿನ ಬಾರಿ ಭಗವದ್ಗೀತೆ ಕೊಂಡೊಯ್ದಿದ್ದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ 8.4 ಕ್ಕೆ ಕೆನೆಡಿ ಬಾಹ್ಯಕಾಶ ಕೇಂದ್ರದಿಂದ ಅವರು ನೂತನವಾಗಿ ನಿರ್ಮಿಸಿರುವ ಬಾಹ್ಯಾಕಾಶ ನೌಕೆಯಲ್ಲಿ ಗಗನಯಾತ್ರೆ ಕೈಗೊಂಡಿದ್ದಾರೆ. ತಮ್ಮ ಮೂರನೇ ಬಾರಿಯ ಗಗನಯಾತ್ರೆ ಬಗ್ಗೆ ಪ್ರತಿಕ್ರಿಯಿಸಿರುವ ಸುನೀತಾ, ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗೆ ಕಾಲಿಟ್ಟಾಗ ಮತ್ತೆ ಮನೆಗೆ ಮರಳಿದ ಅನುಭವಾಗುತ್ತದೆ. ಈ ಬಾರಿ ಹೊಸ ಬಾಹ್ಯಾಕಾಶ ನೌಕೆಯಲ್ಲಿ ತೆರಳುತ್ತಿರುವ ಬಗ್ಗೆ ಸ್ವಲ್ಪ ಅಂಜಿಕೆ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

Advertisement

ಮಹತ್ವದ ಅಧ್ಯಯನಕ್ಕಾಗಿ ಬಾಹ್ಯಾಕಾಶಕ್ಕೆ ಹಾರಲಿರುವ ಸುನೀತಾ ವಿಲಿಯಮ್ಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳುವ ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದಾರೆ.

ಸುನಿತಾ ವಿಲಿಯಮ್ಸ್ ಗೆ ಇದು ಮೂರನೇ ಬಾಹ್ಯಾಕಾಶ ಪಯಣವಾಗಿದ್ದು, ಈ ಹಿಂದೆ ಅವರು, ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಅಲ್ಲಿ ಕಳೆದಿದ್ದರು. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗನನ ಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದುವರೆಗೆ ಸುನಿತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಒಟ್ಟು 50 ಗಂಟೆ 40 ನಿಮಿಷ ಕಾಲ ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ.

ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಮೋಸಾ ಪ್ರಿಯೆ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಮೋಸ ಸವಿಯುವ ಮಜವೇ ಬೇರೆ ಎಂದಿದ್ದಾರೆ.

Advertisement
Tags :
Advertisement