ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಪೈಪ್‌ ಮೂಲಕ ಆಹಾರ, ಆಮ್ಲಜನಕ ಪೂರೈಕೆ

ಉತ್ತರಕಾಶಿ: ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೂ ಸಾಧ್ಯವಾಗಲಿದೆ.
10:01 PM Nov 20, 2023 IST | Umesha HS

ಉತ್ತರಕಾಶಿ: ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೂ ಸಾಧ್ಯವಾಗಲಿದೆ.

Advertisement

ಇದಕ್ಕೂ ಮುನ್ನ ಸುರಂಗದ ಮೇಲ್ಭಾಗದಲ್ಲಿದ್ದ 4 ಇಂಚಿನ ಟ್ಯೂಬ್ ಮೂಲಕ ಆಮ್ಲಜನಕ ಹಾಗೂ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಖಲ್ಖೋ ಸ್ಥಳಕ್ಕೆ ಭೇಟಿ ನೀಡಿದ್ದು, ಇತ್ತೀಚಿನ ಬೆಳವಣಿಗೆಯನ್ನು ರಕ್ಷಣಾ ಕಾರ್ಯಾಚರಣೆಯೆಡೆಗೆ ಮೊದಲ ಪ್ರಗತಿ ಎಂದು ಹೇಳಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ದ ಡ್ರೋನ್‌ಗಳು ಮತ್ತು ರೋಬೋಟ್‌ಗಳನ್ನು ಸಹ ಸ್ಥಳಕ್ಕೆ ತರಲಾಗಿದ್ದು, ಸಿಲುಕಿರುವ ವ್ಯಕ್ತಿಗಳು ಅಲ್ಲಿಂದ ಹೊರಬರುವುದಕ್ಕೆ ಬೇರೆ ಮಾರ್ಗಗಳ ಸಾಧ್ಯತೆಯನ್ನು ಪರಿಶೀಲಿಸಲಾಗಿದೆ. ಈ ನಡುವೆ ಪ್ರಧಾನಿ ಅವರು ಕೂಡ ದೂರವಾಣಿ ಮೂಲಕ ಕಾರ್ಯಾಚರಣೆ ಕುರಿತು ವಿಚಾರಣೆ ನಡೆಸಿದ್ದಾರೆ.

Advertisement
Advertisement
Tags :
FOODlabourpipeಆಮ್ಲಜನಕಉತ್ತರಕಾಶಿಕಾರ್ಮಿಕರುಸುರಂಗ
Advertisement
Next Article