ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.
10:55 PM May 11, 2024 IST | Nisarga K
ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

Advertisement

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

Advertisement

Advertisement
Tags :
AWARDbengaluruCelco'sLatestNewsNewsKarnatakaRichard HansenSuryamitra
Advertisement
Next Article