For the best experience, open
https://m.newskannada.com
on your mobile browser.
Advertisement

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸಿದೆ.
02:20 PM May 11, 2024 IST | Nisarga K
‘ಕಣ್ತಪ್ಪಿನಿಂದ’ ಆದ ಅಚಾತುರ್ಯ  ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್
‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಬೆಂಗಳೂರು: ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸಿದೆ.

Advertisement

ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ, ‘ಕಣ್ತಪ್ಪಿನಿಂದ’ ಆದ ಅಚಾತುರ್ಯ ಎಂದು ಹೇಳಿದೆ. ತಪ್ಪು ಗೊತ್ತಾದಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸುವರ್ಣ ನ್ಯೂಸ್ ನಲ್ಲಿ ನಿರೂಪಕಿ ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿತ್ತು.

Advertisement

ಇದರ ಸ್ಕ್ರೀನ್‌ ಶಾಟ್‌ ನ ವಿಡಿಯೋವನ್ನು ಆಲ್ಟ್‌ ನ್ಯೂಸ್‌ ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೈರ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ವಿಷಯ ಬಹಿರಂಗಗೊಂಡಿದೆ.

Advertisement
Tags :
Advertisement