For the best experience, open
https://m.newskannada.com
on your mobile browser.
Advertisement

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ ಮೇ 27ರವರೆಗೆ ನ್ಯಾಯಾಂಗ ಬಂಧನ ಆದೇಶಿಸಿ ಜೈಲಿಗೆ ಕಳುಹಿಸಲಾಗಿದೆ.
05:42 PM Apr 29, 2024 IST | Nisarga K
ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ   ಮೇ 27ರವರೆಗೆ ನ್ಯಾಯಾಂಗ ಬಂಧನ
ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ ಮೇ 27ರವರೆಗೆ ನ್ಯಾಯಾಂಗ ಬಂಧನ ಆದೇಶಿಸಿ ಜೈಲಿಗೆ ಕಳುಹಿಸಲಾಗಿದೆ.

Advertisement

ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಡಿ ಪೋಕ್ಸೋ ಪ್ರಕರಣದಡಿ ಚಿತ್ರದುರ್ಗದ ಮುರುಘ ರಾಜೇಂದ್ರ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಶರಣರು 14 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ನಂತರ ಜಾಮೀನಿನ ಮೇರೆಗೆ ಹೊರ ಬಂದು ದಾವಣಗೆರೆ ಶಾಖಾಮಠದಲ್ಲಿ ವಾಸ್ತವ್ಯ ಹೂಡಿದ್ದರು.

ಆದರೆ ಸಂತ್ರಸ್ಥ ದೂರುದಾರರ ವಿಚಾರಣೆ ಇನ್ನೂ ಬಾಕಿ ಇದ್ದುದರಿಂದ ಹೊರ ಬಂದ ಸ್ವಾಮೀಜಿ ಮೇಲೆ ಮತ್ತೊಮ್ಮೆ ದೂರು ನೀಡಿದ್ದು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಅಲ್ಲಿ ಪೋಕ್ಸೋ ಪ್ರಕರಣದ ಗಂಭೀರತೆ ಅರಿತ ಸುಪ್ರೀಂ ಕೋರ್ಟ್‌ ಮುರುಘಾ ಶ್ರೀಗಳ ಜಾಮೀನು ರದ್ದುಗೊಳಿಸಿ, ಒಂದು ವಾರದೊಳಗೆ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿತ್ತು.

Advertisement

ಅದರಂತೆ ಸ್ವಾಮೀಜಿ ಚಿತ್ರದುರ್ಗ ಜಿಲ್ಲೆಯ 1ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಕೋರ್ಟ್‌ ಆದೇಶವನ್ನು ಪರಿಶೀಲಿಸಿದ ಪೀಠವು ಪೋಕ್ಸೋ ಪ್ರಕರಣದ ದೂರುದಾರರು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾದ್ಯತೆ ಅರಿತು ಮೇ 27ರವರೆಗೆ ನ್ಯಾಯಾಂಗ ಬಂಧನ ಆದೇಶಿಸಿ ಜೈಲಿಗೆ ಕಳುಹಿಸಲಾಗಿದೆ.

Advertisement
Tags :
Advertisement