ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಗಲು ಸ್ವಿಗ್ಗಿ ಡೆಲಿವರಿ ಬಾಯ್, ರಾತ್ರಿ ಬೈಕ್‌ ಕಳವು ಮಾಡುತ್ತಿದ್ದವ ಪೊಲೀಸರ ವಶಕ್ಕೆ

ಬೆಳಗ್ಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ ಕಳ್ಳನನ್ನು ಇದೀಗ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
12:57 PM Apr 16, 2024 IST | Chaitra Kulal

ಬೆಂಗಳೂರು: ಬೆಳಗ್ಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ ಕಳ್ಳನನ್ನು ಇದೀಗ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

Advertisement

ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿದೆ.

ಈತ ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದನು.

Advertisement

ಬೈಯ್ಯಪ್ಪನಹಳ್ಳಿ ಪೊಲೀಸರು ಈತನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Advertisement
Tags :
CASEDELIVERY BOYLatestNewsNewsKarnatakaPOLICESWIGGYTHEFTಬೆಂಗಳೂರು
Advertisement
Next Article