For the best experience, open
https://m.newskannada.com
on your mobile browser.
Advertisement

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸಿ: ಗುರ್ಮೆ ಸುರೇಶ್ ಶೆಟ್ಟಿ

ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದರ ಜೊತೆಗೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
08:37 PM Mar 20, 2024 IST | Ashika S
ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸಿ  ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದರ ಜೊತೆಗೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

Advertisement

ಕುತ್ಯಾರು ದುರ್ಗಾ ಮಂದಿರದ ಬಳಿ ಇಂದು ನಡೆದ ಕುತ್ಯಾರು ಶಕ್ತಿ ಕೇಂದ್ರದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭಾರೀ ಅಂತರದ ಮತಗಳಿಂದ ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಕಾಪು ಉಸ್ತುವಾರಿಗಳಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸುಶಾಂತ್ ಶೆಟ್ಟಿ, ಕುತ್ಯಾರು ಶಕ್ತಿ ಕೇಂದ್ರದ ಸಂಚಾಲಕರಾದ ಗಣೇಶ್ ಶೆಟ್ಟಿ ಪೈಯಾರು, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ ಮತ್ತು ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Advertisement
Tags :
Advertisement