For the best experience, open
https://m.newskannada.com
on your mobile browser.
Advertisement

ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ: ಬಿಜೆಪಿ

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
03:05 PM Apr 19, 2024 IST | Ashika S
ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ  ಬಿಜೆಪಿ

ಬೆಂಗಳೂರು:  ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.

Advertisement

ರಾಹುಲ್ ಗಾಂಧಿಯವರ  ದ್ವೇಷದ ಅಂಗಡಿ ಕರ್ನಾಟಕವನ್ನು ಗಲಭೆಯ ತೋಟವನ್ನಾಗಿ ಮಾಡಿದೆ ಎಂದು ಟೀಕಿಸಿದೆ.

‘ರಾಜ್ಯದಲ್ಲಿ ಕಾಂಗ್ರೆಸ್​​ನ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ. ಜೈ ಶ್ರೀರಾಮ್‌ ಎಂದರೆ ‘ಬ್ರದರ್ಸ್‌’ಗಳಿಂದ ಹಲ್ಲೆ. ಲವ್‌ ಜಿಹಾದ್‌ಗೆ ಒಪ್ಪದೆ ಇದ್ದರೆ ಬರ್ಬರ ಕೊಲೆ. ಒಡೆಯರ್‌ ಪರ ನಿಂತರೆ ಕಾರು ಹರಿಸಿ ಕೊಲೆ. ಡ್ರಾಪ್ ಕೊಟ್ಟರೆ‌ ಮತಾಂಧರಿಂದ ಹಿಗ್ಗಾಮುಗ್ಗ ಥಳಿತ. ಕನ್ನಡ ಮಾತನಾಡಿದರೆ ನಟಿ ಮೇಲೆಯೇ ಹಲ್ಲೆ ಯತ್ನ.

Advertisement

ಚುನಾವಣೆ ಸಮಯದಲ್ಲಿ ಜಿಹಾದಿ ಮತಾಂಧ ಬ್ರದರ್ಸ್‌ಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಆ ದಿನಗಳ ಕೊತ್ವಾಲ್‌ ಶಿಷ್ಯ ಡಿಕೆ ಶಿವಕುಮಾರ್ ಬೀದಿಗೆ ಬಿಟ್ಟು ಹಿಂದೂಗಳನ್ನೇ ಟಾರ್ಗೆಟ್‌ ಮಾಡಿ ಬೆದರಿಸುತ್ತಿದ್ದಾರೆ. ಕರ್ನಾಟಕವನ್ನು ಮತಾಂಧರ ಗಲಭೆಯ ತೋಟವನ್ನಾಗಿ ಮಾಡಿದೆ ರಾಹುಲ್ ಗಾಂಧಿ ಅವರು ದ್ವೇಷದ ಅಂಗಡಿ!’ ಎಂದು ಬಿಜೆಪಿ ಎಕ್ಸ್ ಸಂದೇಶದಲ್ಲಿ ಕಿಡಿಕಾರಿದೆ.

Advertisement
Tags :
Advertisement