ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆನ್‌ಲೈನ್ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ ಪತ್ನಿ ಜ್ಯೋತಿಕಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದ್ದಾರೆ.
12:33 PM May 05, 2024 IST | Chaitra Kulal

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ ಪತ್ನಿ ಜ್ಯೋತಿಕಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದ್ದಾರೆ.

Advertisement

ಸಂದರ್ಶಕರು, ಈ ಬಾರಿ ಏಕೆ ವೋಟ್ ಮಾಡಲು ಬರಲಿಲ್ಲ? ಎಂದು ಜ್ಯೋತಿಕಾಗೆ ಕೇಳಿದ್ದರು. ಆಗ ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ ಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.

ಮತದಾನದ ಸಂದರ್ಭದಲ್ಲಿ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಇರಬಹುದು, ನಮಗೆ ಅನಾರೋಗ್ಯ ಆಗಿರಬಹುದು. ಅದು ನಮ್ಮ ಖಾಸಗಿ ವಿಚಾರ. ಕೆಲವೊಮ್ಮೆ ಖಾಸಗಿಯಾಗಿ ವೋಟ್ ಮಾಡಿ ಬಂದಿರುತ್ತೇವೆ, ಆನ್‌ಲೈನ್‌ನಲ್ಲಿ ವೋಟ್ ಮಾಡಿರಬಹುದು. ಎಲ್ಲವೂ ಪಬ್ಲಿಶ್ ಆಗಬೇಕೆಂದಿಲ್ಲ. ಜೀವನಕ್ಕೆ ಒಂದು ಖಾಸಗಿ ಭಾಗವಿದೆ ಮತ್ತು ಅದನ್ನು ನಾವು ಗೌರವಿಸಬೇಕು ಎಂದರು.

Advertisement

ಆನ್‌ಲೈನ್‌ನಲ್ಲಿ ಮತದಾನ ಮಾಡುವ ಅವಕಾಶವಿದ್ದರೆ ನಮಗೂ ಹೇಳಿ. ನಾವು ಮಾಡುತ್ತೇವೆ ಎಂದು ನೆಟ್ಟಿಗರು ನಟಿಯ ಕಾಲೆಳೆದಿದ್ದಾರೆ. ಜ್ಯೋತಿಕಾ ಅವರೇ ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷ ನಡೆಯಲ್ಲ, 5 ವರ್ಷಕೊಮ್ಮೆ,  ಭಾರತದಲ್ಲಿ ಇದುವರೆಗೂ ನಾವು ಆನ್‌ಲೈನ್ ವೋಟಿಂಗ್ ಬಗ್ಗೆ ನಾವು ಕೇಳಿಲ್ಲ ಎಂದು ಜ್ಯೋತಿಕಾಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಂಡಿದ್ದಾರೆ. ವೋಟ್‌ ಮಾಡಿಲ್ಲ ಎಂದು ನೇರವಾಗಿಯೇ ಒಪ್ಪಿಕೊಳ್ಳಬಹುದಲ್ಲ. ಅದನ್ನು ಹೀಗೆ ಯಾಕೆ ಹೇಳಬೇಕು ಎಂದೆಲ್ಲಾ ನಟಿಗೆ ನೆಟ್ಟಿಗರು ಪ್ರಶ್ನಿಸಿದ್ದಾರೆ.

Advertisement
Tags :
JyothikaLatestNewsNewsKarnatakaOnline votingtamilVOTE
Advertisement
Next Article