ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತೆಲಂಗಾಣ ಕಾಂಗ್ರೆಸ್‌ ಶಾಸಕರು ಹೈದರಾಬಾದ್‌ಗೆ ಶಿಫ್ಟ್

ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.
11:58 AM Dec 03, 2023 IST | Ashika S

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.

Advertisement

ಶಿವಕುಮಾರ್ ಅವರು ಈಗಾಗಲೇ ಹೈದರಾಬಾದ್​ ತಲುಪಿದ್ದಾರೆ. ಅವರ ಜತೆ ಕರ್ನಾಟಕದ ಇತರ ಕೆಲವು ಸಚಿವರೂ ಇದ್ದಾರೆ. ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನ ಹೊರಗೆ ಬಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಕಾಂಗ್ರೆಸ್​ನ ನೂತನ ಶಾಸಕರಾಗಿ ಆಯ್ಕೆಯಾಗುವವರನ್ನು ಕರೆದೊಯ್ಯಲೆಂದೇ ಈ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಹಂತದಲ್ಲಿ ಕಾಂಗ್ರೆಸ್‌ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್‌ ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಲಾಗಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್‌ ಮಾಡಲಾಗಿದೆ.

Advertisement

ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಗೇಮ್ ಆಡಲು ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್‌ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಮೂರು ಬಸ್‌ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

Advertisement
Tags :
LatetsNewsNewsKannadaಕಾಂಗ್ರೆಸ್ಚುನಾವಣೆಟ್ರಬಲ್ ಶೂಟರ್ಡಿಕೆ ಶಿವಕುಮಾರ್ಡಿಸಿಎಂತೆಲಂಗಾಣವಿಧಾನಸಭೆ
Advertisement
Next Article