ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಜ್ಜಯಿನಿಯ ದೇವಸ್ಥಾನದಲ್ಲಿ ಅಗ್ನಿ ಅವಘಡ !

ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿದಂತೆ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ. ಹೋಳಿ ಹಬ್ಬದ ಅಂಗವಾಗಿ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಐವರು ಅರ್ಚಕರು ಮತ್ತು ನಾಲ್ವರು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
10:20 AM Mar 25, 2024 IST | Ashitha S

ಮಧ್ಯಪ್ರದೇಶ: ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿದಂತೆ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ.

Advertisement

ಹೋಳಿ ಹಬ್ಬದ ಅಂಗವಾಗಿ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಐವರು ಅರ್ಚಕರು ಮತ್ತು ನಾಲ್ವರು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಸ್ಮ ಆರತಿ ವೇಳೆ ಮಹಾಕಾಲ್‌ಗೆ ಗುಲಾಲ್‌ ಅರ್ಪಿಸುವ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಧೂಳೇಂದಿ ಎಂಬ ಕಾರಣಕ್ಕೆ ಗರ್ಭಗುಡಿಯಲ್ಲಿ ಕವರ್‌ ಹಾಕಲಾಗಿದ್ದು, ಬೆಂಕಿ ತಗುಲಿ ಅರ್ಚಕರು ಮತ್ತು ಭಕ್ತರ ಮೇಲೆ ಬಿದ್ದಿದೆ ಎಂದು ಅರ್ಚಕ ಆಶಿಶ್ ಪೂಜಾರಿ ಹೇಳಿದ್ದಾರೆ.

Advertisement

ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ, ಅವರ ವೈದ್ಯಕೀಯ ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾ ಅಧಿಕಾರಿ ನೀರಜ್ ಕುಮಾರ್ ಸಿಂಗ್ ಹೇಳಿದ್ದಾರೆ.

Advertisement
Tags :
indiaKARNATAKALatestNewsNewsKannadaನವದೆಹಲಿ
Advertisement
Next Article