ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ ನಿಧನ

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.
06:44 PM Feb 05, 2024 IST | Ashika S

ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

Advertisement

ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಗಡುವಾಡು ಶ್ರೀಧೂಮಾವತಿ ದೈವಸ್ಥಾನ ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮಣಿಪುರ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಮಣಿಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಗುತ್ತಿಗೆದಾರರಾಗಿ, ಕೆಮ್ತೂರಿನ ಕ್ರಶರ್ ಉದ್ಯಮವನ್ನು ನಡೆಸುತ್ತಿದ್ದರು. ಇವರು ರಂಗಭೂಮಿಯಲ್ಲಿ ತನ್ನ ಛಾಪು ಮೂಡಿಸಿದ್ದು, 80ರ ದಶಕದಲ್ಲಿ ಹಲವು ನಾಟಕಗಳನ್ನು ರಚಿಸಿದ್ದಾರೆ. ಅಲ್ಲದೆ, ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಶೆಟ್ಟಿ ಅವರು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಸೋದರ ಮಾವನಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Advertisement

Advertisement
Tags :
LatetsNewsNewsKannadaಅಸೌಖ್ಯಆಡಳಿತ ಮೊಕ್ತೇಸರುಕಲ್ಮಂಜೆ ಮಹಾಲಿಂಗೇಶ್ವರದೇವಸ್ಥಾನನಿಧನಮಹಾಗಣಪತಿ
Advertisement
Next Article