For the best experience, open
https://m.newskannada.com
on your mobile browser.
Advertisement

ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದು ಗೆ ತಾತ್ಕಾಲಿಕ ರಿಲೀಫ್​​

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
01:12 PM Feb 19, 2024 IST | Ashitha S
ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದು ಗೆ ತಾತ್ಕಾಲಿಕ ರಿಲೀಫ್​​

ನವದೆಹಲಿ: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Advertisement

ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.

Advertisement

ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.

Advertisement
Tags :
Advertisement