For the best experience, open
https://m.newskannada.com
on your mobile browser.
Advertisement

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
11:57 AM May 09, 2024 IST | Ashitha S
ಪಾಕ್ ಬಂದರಿನಲ್ಲಿ ಉಗ್ರರ ದಾಳಿ  7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಗ್ವಾದರ್​: ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Advertisement

ಗ್ವಾದರ್‌ನ ಸರಬಂದ್‌ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್​​ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮಲಗಿದ್ದ ಏಳು ಮಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ.

Advertisement

ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ.
ಈ ಹಿಂದೆ ಮಾರ್ಚ್ 20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು. ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ.

Advertisement
Tags :
Advertisement