ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕಿಸ್ತಾನದ ಮಿಯಾನ್‌ವಾಲಿ ವಾಯುನೆಲೆ ಮೇಲೆ ಉಗ್ರ ದಾಳಿ

ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕಿಸ್ತಾನದ ವಾಯುನೆಲೆಯು ಮೇಲೆ ಆತ್ಮಹತ್ಯಾ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ಜಿಹಾದಿಗಳು ದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.
09:40 AM Nov 04, 2023 IST | Gayathri SG

ಇಸ್ಲಮಾಬಾದ್‌: ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ಪಾಕ್​​ ವಾಯುನೆಲೆಯ ಮೇಲೆ ಉಗ್ರರು ಹಲವಾರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ ಭಾರೀ ಶಸ್ತ್ರಸಜ್ಜಿತ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಮೂವರು ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ. ಭಯೋತ್ಪಾದಕರು ಪಾಕಿಸ್ತಾನ ವಾಯುನೆಲೆಯ ಭಾಗದಲ್ಲಿ ಸುತ್ತುವರಿದ್ದ ಗೋಡೆಗಳಿಗೆ ಏಣಿಯನ್ನು ಬಳಸಿ ಒಳಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಉಗ್ರರ ಈ ದಾಳಿಯಿಂದ ಪಾಕ್​​ ವಾಯುನೆಲೆಯಲ್ಲಿರುವ ಯುದ್ಧ ವಿಮಾನಗಳು ಕೂಡ ನಾಶವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕ್​​ ಸೇನೆ, ಭಯೋತ್ಪಾದಕರು ದಾಳಿ ಮಾಡಿರುವುದು ನಿಜ, ಆದರೆ ಅವರ ದಾಳಿಯನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದೆ. ಪಾಕಿಸ್ತಾನ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು ಈ ವೇಳೆ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

Advertisement

Advertisement
Advertisement
Tags :
LatestNewsಪಾಕಿಸ್ತಾನವಾಯುನೆಲೆ
Advertisement
Next Article