ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಳ್ಳಾರಿಯಲ್ಲಿ ಅಮೋನಿಯಂ ನೈಟ್ರೇಟ್‌ ಖರೀದಿಸಿದ್ದ ಉಗ್ರರು

ಬಳ್ಳಾರಿ ನಗರದಲ್ಲಿ ಡಿ.18ರಂದು ನಗರದಲ್ಲಿ ನಡೆದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದಾಳಿ ವೇಳೆ ಬಂಧಿತರಾದ ಇಬ್ಬರು ಶಂಕಿತ ಉಗ್ರರು ಸ್ಫೋಟಕ ವಸ್ತು ತಯಾರಿಕೆಗೆ ಅಮೋನಿಯಂ ನೈಟ್ರೇಟ್‌ ಅನ್ನು ಬಳ್ಳಾರಿಯಲ್ಲಿಯೇ ಖರೀದಿಸಿದ್ದರು ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
08:12 AM Dec 27, 2023 IST | Ashika S

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಡಿ.18ರಂದು ನಗರದಲ್ಲಿ ನಡೆದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದಾಳಿ ವೇಳೆ ಬಂಧಿತರಾದ ಇಬ್ಬರು ಶಂಕಿತ ಉಗ್ರರು ಸ್ಫೋಟಕ ವಸ್ತು ತಯಾರಿಕೆಗೆ ಅಮೋನಿಯಂ ನೈಟ್ರೇಟ್‌ ಅನ್ನು ಬಳ್ಳಾರಿಯಲ್ಲಿಯೇ ಖರೀದಿಸಿದ್ದರು ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

Advertisement

ಬಂಧಿತ ಪ್ರಮುಖ ಆರೋಪಿಗಳಾದ ಮಿನಾಜ್ ಅಲಿಯಾಸ್ ಮಹ್ಮದ್ ಸುಲೇಮನ್ ಹಾಗೂ ಸೈಯದ್ ಸಮೀರ್ ಅವರು ಸ್ಫೋಟಕ ತಯಾರಿಕೆಗೆ ಒಂದು ಕೆಜಿಯಷ್ಟು ಅಮೋನಿಯಂ ನೈಟ್ರೇಟ್‌ ಅನ್ನು ನಗರದ ಫರ್ಟಿಲೈಸರ್ ಅಂಗಡಿಯೊಂದರಲ್ಲಿ ಅಕ್ಟೋಬರ್‌ 22ರಂದು ಖರೀದಿ ಮಾಡಿದ್ದರು ಎಂದು ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಗೊತ್ತಾಗಿದೆ.

ಆದರೆ, ಅಮೋನಿಯಂ ನೈಟ್ರೇಟ್ ನ್ನು ಖರೀದಿ ಮಾಡಿದ್ದು ಯಾವ ಅಂಗಡಿಯಿಂದ ಎಂಬುದರ ಕುರಿತು ಸ್ಪಷ್ಟ ಸುಳಿವನ್ನು ಬಂಧಿತ ಆರೋಪಿಗಳು ನೀಡಿಲ್ಲ. ಖರೀದಿ ಕುರಿತು ರಸೀದಿ ಲಭ್ಯವಾಗಿಲ್ಲ.

Advertisement

Advertisement
Tags :
LatetsNewsNewsKannadaಅಮೋನಿಯಂ ನೈಟ್ರೇಟ್‌ಎನ್‌ಐಎದಾಳಿಮಾಹಿತಿಶಂಕಿತ ಉಗ್ರಸ್ಫೋಟಕ ವಸ್ತು
Advertisement
Next Article