ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್

ರಾಜ್ಯದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.
10:19 AM Jan 26, 2024 IST | Ashitha S

ಬೆಂಗಳೂರು:  ರಾಜ್ಯದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.

Advertisement

ಬಳಿಕ ಮಾತನಾಡಿರುವ ಅವರು,  ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಐತಿಹಾಸಿಕ ದಿನದಂದು ಭಾರತದ ಸಂವಿಧಾನವು ಜಾರಿಗೆ ಬಂದಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನು ಹೊಂದಿದೆ ಎಂದರು.

ಸರ್ಕಾರವು 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲಾ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುತ್ತೇವೆಂದು ಹರ್ಷಿಸುತ್ತೇನೆ. ರಾಜ್ಯದ 223 ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಬರ ಪರಿಹಾರವಾಗಿ ರೈತರಿಗೆ 2000 ರೂಪಾಯಿ ನೀಡಲಾಗಿದೆ. ಕುಡಿಯುವ ನೀರಿಗಾಗಿ ವಿಶೇಷ ಯೋಜನೆ ಜಾರಿಗೆ ತರಲಾಗಿದೆ. ರೈತರ ಸಂಕಷ್ಟ ನಿವಾರಿಸಲು ವಿವಿಧ ಯೋಜನೆಗಳಡಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.

Advertisement

Advertisement
Tags :
GOVERNMENTindiaLatestNewsNewsKannadaಗೆಹ್ಲೋಟ್ನವದೆಹಲಿರಾಜ್ಯಪಾಲ
Advertisement
Next Article