For the best experience, open
https://m.newskannada.com
on your mobile browser.
Advertisement

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಅವರು ಯಕೃತ್ ಸಮಸ್ಯೆಯಿಂದ ಮೇ 8ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 3.30 ಕ್ಕೆ ಹಳೆಕೋಟೆ ನಿವಾಸಕ್ಕೆ ಆಗಮಿಸಿತು.
10:03 AM May 09, 2024 IST | Ashitha S
ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ ವಸಂತ ಬಂಗೇರ ಪಾರ್ಥಿವ ಶರೀರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಅವರು ಯಕೃತ್ ಸಮಸ್ಯೆಯಿಂದ ಮೇ 8ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 3.30 ಕ್ಕೆ ಹಳೆಕೋಟೆ ನಿವಾಸಕ್ಕೆ ಆಗಮಿಸಿತು.

Advertisement

ಪಾರ್ಥೀವ ಶರೀರ ಸ್ವಗೃಹಕ್ಕೆ ಆಗಮಿಸುತ್ತಿದ್ದಂತೆ ಬೆಳ್ತಂಗಡಿ ಶೋಕಸಾಗರದಲ್ಲಿ ಮುಳುಗಿತ್ತು. ಬಳಿಕ ಕುಟುಂಬ ವರ್ಗಕ್ಕೆ ಮನೆಯಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಾರ್ಥಿವ ಶರೀರದ ಅಂತಿಮ ವಿಧಿ ನೆರವೇರಿಸಿ ಬಳಿಕ ಕೊಂಚ ಸಮಯ ಅವರ ಆಪ್ತ ಅಭಿಮಾನಿ ವರ್ಗಕ್ಕೆ ಅಂತಿಮನ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು‌.

ಶಾಸಕ ಹರೀಶ್ ಪೂಂಜ ಬಂಗೇರರ ಅಂತಿಮ ದರ್ಶನ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಂತಿಮ ನಮನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸ್ಥಳದಲ್ಲಿದ್ದು ಸಹಕರಿಸಿದರು.

Advertisement

ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಳೆಕೋಟೆ ಮನೆಯಿಂದ ಬೆಳ್ತಂಗಡಿ ತಾಲೂಕು ಕ್ರೀಡಾಂಗಣಕ್ಕೆ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ‌ ಸಾರ್ವಜನಿಕ ದರ್ಶನಕ್ಕಾಗಿ ಕೊಂಡೊಯ್ಯಲಾಯಿತು.

ತಾಲೂಕು ಕ್ರೀಡಾಂಗಣದಲ್ಲಿ ಬಂಗೇರರ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದು, ಕಳೆದ ರಾತ್ರಿಯಿಂದಲೇ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ.

Advertisement
Tags :
Advertisement