ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
11:06 AM Dec 14, 2023 IST | Ashika S

ಉಡುಪಿ: ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

Advertisement

ಮೃತರನ್ನು ಉಡುಪಿ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದೆ. ಇವರು ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಬಳಿಕ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತೆರಳಿದ ಅವರು ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ, ಸೇತುವೆಯ ಮೇಲಿಂದ ನದಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ದೋಣಿ ಮೂಲಕ ಹುಡುಕಾಟ ನಡೆಸಿದರು. ಬುಧವಾರ ಸಂಜೆ ವೇಳೆ ವ್ಯಕ್ತಿಯ ಮೃತದೇಹವು ಅಂಕುದ್ರು ಬಳಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement

ಮೃತ ರವೀಂದ್ರ ಕಳೆದ 10 ವರ್ಷಗಳಿಂದ ಉಡುಪಿಯ ಪೈ ಇಂಟರ್‌ನ್ಯಾಶನಲ್ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಸೇಲ್ಸ್‌ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನಾಪತ್ತೆಸೇತುವೆಸ್ಕೂಟರ್
Advertisement
Next Article