ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರು ಪೊಲೀಸರು ಸಾವು, ಮೂವರಿಗೆ ಗಾಯ

ಗಸ್ತು ತಿರುಗುತ್ತಿದ್ದ ವ್ಯಾನ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಸಂಭವಿಸಿದೆ.
03:19 PM Jan 04, 2024 IST | Gayathri SG

ಹೌರಾ: ಗಸ್ತು ತಿರುಗುತ್ತಿದ್ದ ವ್ಯಾನ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಸಂಭವಿಸಿದೆ.

Advertisement

ಮೃತರನ್ನು ಸಬ್ ಇನ್‌ಸ್ಪೆಕ್ಟರ್ ಸುಜೋಯ್ ದಾಸ್ (45) ಮತ್ತು ಹೋಮ್ ಗಾರ್ಡ್ ಪಲಾಶ್ ಸಮಂತ (31) ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಪೊಲೀಸರನ್ನು ಚಾಲಕ ಅಬು ಬಕರ್ (28) ಮತ್ತು ಗೃಹ ರಕ್ಷಕ ದಳದ ಸುಖದೇಬ್ ಬಿಸ್ವಾಸ್ (25) ಮತ್ತು ಅಲೋಕ್ ಬಾರ್ (26) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೋಲ್ಕತ್ತಾ ಮೂಲದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೌರಾ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸರ ಗಸ್ತು ತಿರುಗುವ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದೆದಿದೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement
Tags :
BreakingNewsLatestNewsNewsKannadaಪಶ್ಚಿಮ ಬಂಗಾಳಹೌರಾ
Advertisement
Next Article