ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತ್ತೊಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರ

ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ಮಹತ್ತರ ಬದಲಾವಣೆ ತಂದಿದೆ. ಈ ಪೈಕಿ ಪ್ರಮುಖ ಘಟ್ಟ ಆರ್ಟಿಕಲ್ 370 ರದ್ದು. ವಿಶೇಷ ಸ್ಥಾನಮಾನ ರದ್ದು ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.
04:38 PM Dec 06, 2023 IST | Ashitha S

ನವದೆಹಲಿ: ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ಮಹತ್ತರ ಬದಲಾವಣೆ ತಂದಿದೆ. ಈ ಪೈಕಿ ಪ್ರಮುಖ ಘಟ್ಟ ಆರ್ಟಿಕಲ್ 370 ರದ್ದು. ವಿಶೇಷ ಸ್ಥಾನಮಾನ ರದ್ದು ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.

Advertisement

ಇದೀಗ ಕೇಂದ್ರ ಬಿಜೆಪಿ ಸರ್ಕಾರ ಮತ್ತೊಂದು ಐತಿಹಾಸಿಕ ಬಿಲ್ ಲೋಕಸಭೆಯಲ್ಲಿ ಮಂಡಿಸಿದೆ. ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಈ ಪೈಕಿ ಮೀಸಲಾತಿ ಮಸೂದೆಯಡಿಯಲ್ಲಿ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಘೋಷಿಸಿದೆ. ಜಮ್ಮು ಮತ್ತು ಕಾಶ್ಮಿರ ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದೆ.

Advertisement

ಹೌದು. . ಜಮ್ಮ ಕಾಶ್ಮೀರ ವಿಧಾನಸಭೆಗೆ ಇಬ್ಬರು ಕಾಶ್ಮೀರ ಪಂಡಿತರ ಮಹಿಳೆ ಸೇರಿ ಹಾಗೂ ಒಂದು ಸ್ಥಾನವನ್ನು ಪಾಕಿಸ್ತಾನ ಆಕ್ರಮಿತಿ ಕಾಶ್ಮೀರದ ನಿರಾಶ್ರಿತರಿಗೆ ನೀಡಲಾಗಿದೆ. ಈ ಎರಡು ಸಮುದಾಯದಿಂದ ಒಟ್ಟು ಮೂವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾಗುವ ಮೀಸಲಾತಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ.

ಕಾಶ್ಮೀರದ ವಲಸೆ ಸಮುದಾಯ & ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ನಿರ್ಗತಿಕರಾಗಿರುವ ಸಮುದಾಯಕ್ಕೆ ಸೀಟು ಕಾಯ್ದಿರಿಸಿದ ಬಿಲ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಭಯೋತ್ಪಾದಕತೆ ಕಾರಣದಿಂದ ಕಾಶ್ಮೀರ ತೊರೆದ ಸಮುದಾಯದ ಕೊಂದು ಕೊರತೆ, ಬೇಡಿಕೆಗೆ ಧನಿಯಾಗಲು ಈ ಸಮುದಾಯದಿಂದ ಇಬ್ಬರು ಜಮ್ಮು & ಕಾಶ್ಮೀರ ವಿಧಾನಸಭೆಗೆ ಪ್ರತಿನಿಧಿಸಲಿದ್ದಾರೆ.

Advertisement
Tags :
GOVERNMENTindiaLatestNewsNewsKannadaಆರ್ಟಿಕಲ್ 370ಕೇಂದ್ರ ಸರ್ಕಾರಜಮ್ಮು ಮತ್ತು ಕಾಶ್ಮೀರನವದೆಹಲಿಬೆಂಗಳೂರು
Advertisement
Next Article