For the best experience, open
https://m.newskannada.com
on your mobile browser.
Advertisement

ಸ್ಟೆಪ್‌ಲ್ಯಾಡರ್ ತಳ್ಳಿ ಕಾರ್ಮಿಕರ ಎಡವಟ್ಟಿನಿಂದ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ

ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ.
02:17 PM May 16, 2024 IST | Chaitra Kulal
ಸ್ಟೆಪ್‌ಲ್ಯಾಡರ್ ತಳ್ಳಿ ಕಾರ್ಮಿಕರ ಎಡವಟ್ಟಿನಿಂದ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ

ಜಕಾರ್ತ: ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Advertisement

ಸಾಮಾನ್ಯವಾಗಿ ವಿಮಾನದಿಂದ ಇಳಿಯಲು ಹಾಗೂ ಹತ್ತಲು ಕೃತಕ ಏಣಿಯನ್ನು ಬಳಸುತ್ತಾರೆ. ಅಂತೆಯೇ ಇಲ್ಲಿಯೂ ಏಣಿಯನ್ನು ಇಡಲಾಗಿದ್ದು, ಕೆಲ ಹೊತ್ತಿನ ಬಳಿಕ ಸಿಬ್ಬಂದಿ ಅಲ್ಲಿಂದ ತೆಗೆದಿದ್ದಾರೆ. ಇದನ್ನು ಗಮನಿಸದ ವಿಮಾನದ ಒಳಗಡೆ ಇದ್ದ ಸಿಬ್ಬಂದಿ ಇಳಿಯಲು ಯತ್ನಿಸಿದ್ದಾರೆ. ಮೆಟ್ಟಿಲು ಇದೆ ಎಂದು ಭಾವಿಸಿ ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಇಂಡೋನೇಷ್ಯಾದ ಟ್ರಾನ್ಸ್‌ನುಸಾ ವಿಮಾನದಿಂದ ವ್ಯಕ್ತಿ ಹೊರಬರುತ್ತಿದ್ದಂತೆಯೇ ಕೆಳಗಡೆ ಇದ್ದ ಇತರ ಇಬ್ಬರು ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದಾರೆ. ಪರಿಣಾಮ ಈ ದುರ್ಘಟನೆ ನಡೆದಿದೆ.

Advertisement

ಈ ಸಿಬ್ಬಂದಿ ವಿಮಾನದಿಂದ ಕೆಳಕ್ಕೆ ಬೀಳುತ್ತಿರುವ ವೀಡಿಯೋವನ್ನು ವೈಮಾನಿಕ ಸಲಹೆಗಾರ ಸಂಜಯ್ ಲಾಜರ್ ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡ ಬಳಿಕ ನೆಟ್ಟಿಗರ ಗಮನಸೆಳೆಯಿತು. ಅಲ್ಲದೇ ಕೂಡಲೇ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿದೆ. ವಿಡಿಯೋ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.

Advertisement
Tags :
Advertisement