ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೇಲ್​ ದಾಳಿಯಲ್ಲಿ ಮೃತಪಟ್ಟ ಗರ್ಭಿಣಿಗೆ ಹೆರಿಗೆ ಮಾಡಿಸಿದ ವೈದ್ಯರು

ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು,  ತುಂಬು ಗರ್ಭಿಣಿಯಾಗಿದ್ದ ಮಹಿಳೆ ಮೃತಪಟ್ಟ ಬಳಿಕವೂ ವೈದ್ಯರು ಹೆರಿಗೆ ಮಾಡಿಸಿ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.
01:01 PM Apr 22, 2024 IST | Chaitra Kulal

ಗಾಜಾ: ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು,  ತುಂಬು ಗರ್ಭಿಣಿಯಾಗಿದ್ದ ಮಹಿಳೆ ಮೃತಪಟ್ಟ ಬಳಿಕವೂ ವೈದ್ಯರು ಹೆರಿಗೆ ಮಾಡಿಸಿ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.

Advertisement

ವೈದ್ಯರು ಮೃತ ಗರ್ಭಿಣಿಯ ಹೆರಿಗೆ ಮಾಡಿಸಿ 1.4 ಕೆಜಿ ತೂಕದ ಮಗುವನ್ನು ಹೊರತೆಗೆದಿದ್ದರು. ಮಗುವಿನ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸಿಕೊಳ್ಳುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

ಮಗುವನ್ನು ರಾಫಾ ಆಸ್ಪತ್ರೆಯಲ್ಲಿ ಇನ್ಕ್ಯುಬೇಟರ್‌ನಲ್ಲಿ ಮತ್ತೊಂದು ಶಿಶುವಿನ ಜೊತೆಗೆ ಇರಿಸಲಾಯಿತು. ದಾಳಿಯಲ್ಲಿ ಮೃತಪಟ್ಟ ಮಗುವಿನ ಸಹೋದರಿ ತನ್ನ ತಂಗಿಗೆ ರೂಹ್ ಎಂದು ನಾಮಕರಣ ಮಾಡಲು ಬಯಸಿದ್ದಳು ಎಂದು ಮಗುವಿನ ಚಿಕ್ಕಪ್ಪ ಹೇಳಿದ್ದಾರೆ.

Advertisement

ಮಗು ಮೂರ್ನಾಲ್ಕು ವಾರಗಳ ಕಾಲ ಆಸ್ಪತ್ರೆಯಲ್ಲಿಯೇ ಇರುತ್ತದೆ, ಅದಾದ ನಂತರ ಮಗುವನ್ನು ಎಲ್ಲಿಗೆ ಕಳುಹಿಸಬೇಕು ಎಂದು ನಾವು ನೋಡುತ್ತೇವೆ ಎಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ಸೇನಾ ದಾಳಿಗಳು ನಡೆದಿವೆ, 48 ಪ್ಯಾಲೆಸ್ತೀನಿಯರನ್ನು ಕೊಂದು 79 ಮಂದಿ ಗಾಯಗೊಳಿಸಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಗಾಜಾದ ಆಸ್ಪತ್ರೆಯಲ್ಲಿ ಸಾಮೂಹಿಕ ಸಮಾಧಿ ಗಾಜಾದ ಆಸ್ಪತ್ರೆಯೊಂದರಲ್ಲಿ 200ಕ್ಕೂ ಅಧಿಕ ಶವಗಳು ಪತ್ತೆಯಾಗಿವೆ. ಇಸ್ರೇಲ್ ಆರು ತಿಂಗಳಿಗಿಂತ ಹೆಚ್ಚು ಕಾಲ ಗಾಜಾದ ಮೇಲೆ ನಿರಂತರ ದಾಳಿ ನಡೆಸಿತ್ತು. ಏಪ್ರಿಲ್​ 7ರಂದು ಇಸ್ರೇಲಿ ಮಿಲಿಟರಿ ತನ್ನ ಸೇನೆಯನ್ನು ಹಿಂಪಡೆದಿದೆ.

ಬಳಿಕ ಎಲ್ಲೆಡೆ ರಕ್ಷಣಾ ಸಿಬ್ಬಂದಿಗಳು ಜನರನ್ನು ಹುಡುಕುವ ಪ್ರಯತ್ನವನ್ನು ಮುಂದುವರೆಸಿದ್ದಾರೆ, ಆಗ 180ಕ್ಕೂ ಅಧಿಕ ಶವಗಳು ಪತ್ತೆಯಾಗಿವೆ.

ಇಸ್ರೇಲ್​ ಗಾಜಾ ಮೇಲೆ ನಡೆಸಿದ ದಾಳಿಯಲ್ಲಿ 34,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement
Tags :
attackDOCTORHOSPITAlLatestNewsNewsKarnatakaಇಸ್ರೇಲ್‌
Advertisement
Next Article