For the best experience, open
https://m.newskannada.com
on your mobile browser.
Advertisement

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ.
12:13 PM May 10, 2024 IST | Chaitra Kulal
ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ನೆಲಮಂಗಲ: ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ.

Advertisement

ಬಾಲಕಿ ಯಲ್ಲಮ್ಮ (7) ಎಂಬಾಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಿನ್ನೆ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗೇಟ್ ಕಟ್ ಆಗಿ ಈ ದುರ್ಘಟನೆ ಸಂಭವಿಸಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಮೂಲದ ಮುಕ್ಕಣ್ಣ ಹಾಗೂ ಬಾಲಮ್ಮರ ದಂಪತಿ ಕೂಲಿ ಕೆಲಸ ಮಾಡಿಕೊಂಡು ಬೆಂಗಳೂರಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಳೆಯು ಮುದ್ದು ಮಗಳನ್ನು ಕಸಿದುಕೊಂಡಿದೆ. ಪ್ರಕರಣ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement

Advertisement
Tags :
Advertisement