For the best experience, open
https://m.newskannada.com
on your mobile browser.
Advertisement

ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲ: ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
03:57 PM Jul 07, 2024 IST | Chaitra Kulal
ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲ  ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

Advertisement

ಶೇಷಾದ್ರಿಪುರದಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್‍ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆ ಡೆಂಗ್ಯೂ ಹಾಗೂ ಝಿಕಾ ಹೆಚ್ಚಾಗುತ್ತಿದೆ. ಸರ್ಕಾರ ಡೆಂಗ್ಯೂ ನಿಯಂತ್ರಣದ ಬಗ್ಗೆ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Advertisement

ಮುಂದಿನ ಅಧಿವೇಶನದಲ್ಲಿ ಡೆಂಗ್ಯೂ ಹಾಗೂ ಝಿಕಾ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ದರ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

Advertisement
Tags :
Advertisement