For the best experience, open
https://m.newskannada.com
on your mobile browser.
Advertisement

ಪತ್ನಿಯ ಕುತ್ತಿಗೆಯನ್ನು ಸೀರೆಯಿಂದ ಬಿಗಿದು ಕೊಲೆ ಮಾಡಿ ಪತಿ ಪರಾರಿ

ಪತ್ನಿಯನ್ನು ಹತ್ಯೆ ಮಾಡಿ ಪಾಪಿ ಪತಿ ಪರಾರಿಯಾದ ಘಟನೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
02:29 PM Apr 07, 2024 IST | Chaitra Kulal
ಪತ್ನಿಯ ಕುತ್ತಿಗೆಯನ್ನು ಸೀರೆಯಿಂದ ಬಿಗಿದು ಕೊಲೆ ಮಾಡಿ ಪತಿ ಪರಾರಿ

ಬೆಂಗಳೂರು: ಪತ್ನಿಯನ್ನು ಹತ್ಯೆ ಮಾಡಿ ಪಾಪಿ ಪತಿ ಪರಾರಿಯಾದ ಘಟನೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ನೇತ್ರಾವತಿ ಹತ್ಯೆಯಾದ ಪತ್ನಿ. ವೆಂಕಟೇಶ್‌ ಕೊಲೆ ಆರೋಪಿಯಾಗಿದ್ದಾನೆ.

ಪತ್ನಿ ನೇತ್ರಾವತಿಯನ್ನು ಸೀರೆಯಿಂದ ಆಕೆಯ ಕುತ್ತಿಗೆ ಬಿಗಿದು ವೆಂಕಟೇಶ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಿನ್ನೆ ಶನಿವಾರ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Advertisement

ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಪರಾರಿ ಆಗಿರುವ ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
Advertisement