For the best experience, open
https://m.newskannada.com
on your mobile browser.
Advertisement

ಬಿಹಾರದ ನೂತನ ಡಿಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ಸಿನ್ಹಾ ಆಯ್ಕೆ

ನಿತೀಶ್ ಕುಮಾರ್ ಅವರು ಇಂದು  ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ.
01:41 PM Jan 28, 2024 IST | Ashitha S
ಬಿಹಾರದ ನೂತನ ಡಿಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ  ಸಿನ್ಹಾ ಆಯ್ಕೆ

ಬಿಹಾರ : ನಿತೀಶ್ ಕುಮಾರ್ ಅವರು ಇಂದು  ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ.

Advertisement

ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾರನ್ನು ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ, ಜೆಡಿಯು ಮತ್ತು ಇತರ ಮಿತ್ರಪಕ್ಷಗಳೊಂದಿಗೆ ರಾಜ್ಯದಲ್ಲಿ ಎನ್ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಹಾರ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಮುಂಚಿತವಾಗಿ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಇತರ ಮಿತ್ರಪಕ್ಷಗಳೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಬಿಜೆಪಿ ದೃಢಪಡಿಸಿದೆ.

Advertisement

Read More:
1.

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್ ರಾಜೀನಾಮೆ

Advertisement
Tags :
Advertisement