For the best experience, open
https://m.newskannada.com
on your mobile browser.
Advertisement

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ ನಡೆದಿದೆ.
12:47 PM May 19, 2024 IST | Chaitra Kulal
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ

ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ ನಡೆದಿದೆ.

Advertisement

ಹರಿಯಾಣ ಮೂಲದ ರಾಜೇಶ್ ಕುಮಾರ್ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ, ಈ ವೇಳೆ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಚೆಕ್ ಇನ್ ವೇಳೆ ಅಧಿಕಾರಿಗಳ ಬಳಿ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ.

ಇದರಿಂದ ಆತಂಕಗೊಂಡ ಅಧಿಕಾರಿಗಳು ಬ್ಯಾಗ್ ಚೆಕ್ ಮಾಡಿ, ಕೂಡಲೇ ಆತನನ್ನು ವಶಕ್ಕೆ ಪಡೆದು, ಕೆಐಎಎಲ್ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಜೇಶ್, ತಮಾಷೆಗಾಗಿ ಬಾಂಬ್ ಇದೆ ಎಂಬುದಾಗಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಬಳಿಕ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಆತನನ್ನು ಬಿಡುಗಡೆ ಮಾಡಿದ್ದಾರೆ.

Advertisement
Tags :
Advertisement