For the best experience, open
https://m.newskannada.com
on your mobile browser.
Advertisement

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
10:31 AM Apr 27, 2024 IST | Ashitha S
ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

'ಮತ ಚಲಾಯಿಸಿದ ದೇಶದಾದ್ಯಂತದ ಜನರಿಗೆ ಕೃತಜ್ಞತೆಗಳು. ಎನ್‌ಡಿಎಗೆ ಸಿಕ್ಕಿರುವ ಭಾರೀ ಜನಬೆಂಬಲವು ವಿರೋಧಪಕ್ಷಗಳನ್ನು ಇನ್ನಷ್ಟು ಹತಾಶೆಗೊಳಿಸಲಿದೆ. ಮತದಾರರು ಎನ್‌ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಪ್ರಬಲ ಎನ್‌ಡಿಎ ಬೆಂಬಲಕ್ಕೆ ಶಕ್ತಿ ತುಂಬುತ್ತಿದ್ದಾರೆ' ಎಂದು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

ಕೇರಳದ ಎಲ್ಲ 20 ಕ್ಷೇತ್ರಗಳು ಸೇರಿದಂತೆ ರಾಜಸ್ಥಾನದ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 7, ಬಿಹಾರ ಮತ್ತು ಅಸ್ಸಾಂನಲ್ಲಿ ತಲಾ 5, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಹಾಗೂ ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಕ್ಷೇತ್ರಗಳಲ್ಲಿಯೂ ಮತದಾನ ನಡೆದಿತ್ತು.

Advertisement
Tags :
Advertisement