ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ: ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು.
05:36 PM Apr 17, 2024 IST | Chaitra Kulal

ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ.ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು.

Advertisement

SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ ವಿರೋಧಿ ಶಕ್ತಿಗಳನ್ನು ಸೋಲಿಸಲು ಪಕ್ಷವು ನಿರ್ಣಾಯಕ ಪಾತ್ರ ವಹಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕಾಗಿ ಗರಿಷ್ಠ ಮಟ್ಟದ ಮತದಾನ ಆಗುವ ನಿಟ್ಟಿನಲ್ಲಿ ಎಲ್ಲಾ ಮತದಾರರನ್ನು ತನ್ನ ಹಕ್ಕು ಚಲಾವಣೆಯಲ್ಲಿ ಭಾಗವಹಿಸಲು ಪಕ್ಷದ ನಾಯಕರು, ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಕಾರ್ಯಗಳನ್ನು ಮಾಡಬೇಕೆಂದು ಸಭೆ ನಿರ್ಣಯಿಸಿತು, ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ನಡೆಸಿ ಪಕ್ಷದ ಕೇಡರುಗಳಿಗೆ ಈ ವಿಚಾರದಲ್ಲಿ ಮನವರಿಕೆ ಮಾಡಿ ಕೊಡಲು ಸಭೆ ತೀರ್ಮಾನಿಸಿದೆ.

Advertisement

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡೂರ್, ಜಮಾಲ್ ಜೋಕಟ್ಟೆ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಮೂಸಬ್ಬ ತುಂಬೆ, ವಿಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Advertisement
Tags :
cautionElectionsLatestNewsLOK SABHANewsKarnatakaSDPIvotingಮಂಗಳೂರು
Advertisement
Next Article