ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆಗೆ ಬ್ರೇಕ್ ಹಾಕಿದ ಸುಪ್ರೀಂ !

5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆಗೆ ಮತ್ತೆ ಬ್ರೇಕ್ ಬಿದ್ದಿದೆ. ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.
12:23 PM Apr 08, 2024 IST | Ashitha S

ನವದೆಹಲಿ: 5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆಗೆ ಮತ್ತೆ ಬ್ರೇಕ್ ಬಿದ್ದಿದೆ. ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

Advertisement

ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು, ಇಂದು ಫಲಿತಾಂಶ ಪ್ರಕಟವಾಗ ಬೇಕಿತ್ತು. ಫಲಿತಾಂಶ ಹೊರ ಬೀಳುವುದಕ್ಕೆ ಮುಂಚೆಯೇ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಲಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ 5,8,9 ನೇ ತರಗತಿಗೆ ರಾಜ್ಯ ಶಿಕ್ಷಣ ಇಲಾಖೆ ‌ಬೋರ್ಡ್ ಪರೀಕ್ಷೆ ನಡೆಸಿತ್ತು. ಬೋರ್ಡ್ ಪರೀಕ್ಷೆ ನಡೆಸಿದಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಕೋರ್ಟ್ ‌ಮೆಟ್ಟಿಲೇರಿತ್ತು. ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಮೌಲ್ಯ ಮಾಪನ ದೋಷದ ಆರೋಪ ಮಾಡಿತ್ತು. ಇಂದು ಪ್ರಕಟವಾಗಬೇಕಿದ್ದ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

Advertisement

Advertisement
Tags :
BreakingNewsindiaLatestNewsನವದೆಹಲಿ
Advertisement
Next Article