For the best experience, open
https://m.newskannada.com
on your mobile browser.
Advertisement

ಜ.20ರಂದು ಬಿಡುಗಡೆ ಆಗಲಿದೆ ಭೀಮ ಚಿತ್ರದ ಟೀಸರ್

ಕನ್ನಡದ ನಟ ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.
06:09 PM Jan 18, 2024 IST | Ashika S
ಜ 20ರಂದು ಬಿಡುಗಡೆ ಆಗಲಿದೆ ಭೀಮ ಚಿತ್ರದ ಟೀಸರ್

ಬೆಂಗಳೂರು: ಕನ್ನಡದ ನಟ ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.

Advertisement

ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ಎಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.

Advertisement

Advertisement
Tags :
Advertisement