ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತೂರು: ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕ

ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿದ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿನಡೆದಿದೆ.
11:38 AM Apr 26, 2024 IST | Ashitha S

ಪುತ್ತೂರು: ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿದ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿನಡೆದಿದೆ.

Advertisement

ರಂಜಿತ್ ಬಂಗೇರ ಎಂಬ ಯುವನೋರ್ವ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನ ಶೇರ್ ಮಾಡಿದ್ದಾನೆ.

ಇನ್ನು ಮತ ಯಂತ್ರದಲ್ಲಿ ದೋಷಕಂಡು ಬಂದು ಮತದಾನಕ್ಕೆ ಅಡಚಣೆ ಉಂಟಾದ ಘಟನೆಯೊಂದು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಎಂಬಲ್ಲಿ ನಡೆದಿದೆ.
ಬೂತ್ ಸಂಖ್ಯೆ 240 ಪದ್ಯಾಣ ಕರೋಪಡಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೀಗಾಗಿ ಮತದಾನ ಪ್ರಕ್ರಿಯೆ ಆರಂಭವಾಗದೇ ಸರತಿ ಸಾಲಿನಲ್ಲಿ ಮತದಾರರು ನಿಂತಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಬೇಕಿದ್ದ ಮತದಾನ 8 ಗಂಟೆಯವರೆಗೆ ವಿಳಂಬವಾಗಿದೆ. ಬಳಿಕ ಮತಯಂತ್ರ ಸರಿಪಡಿಸಿ ಮತದಾನ ಆರಂಭವಾಗಿದೆ.

Advertisement

Advertisement
Tags :
GOVERNMENTindiaKARNATAKALatestNewsNewsKarnataka
Advertisement
Next Article