For the best experience, open
https://m.newskannada.com
on your mobile browser.
Advertisement

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ' ಎಂದಿದ್ದಾರೆ.
06:34 PM May 05, 2024 IST | Ashika S
40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ  ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ' ಎಂದಿದ್ದಾರೆ.

Advertisement

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

'ಅವರು ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ' ಎಂದು ಹೇಳಿದ್ದಾರೆ.

Advertisement

ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿ ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಮೇ 2ನೇ ತಾರೀಖಿನ ಪ್ರಕರಣದಲ್ಲಿ ಯಾವುದೇ ಪುರಾವೆ ಇಲ್ಲ. ಎಲ್ಲಾ ಪೂರ್ತಿ ವಿಷಯ ಹೇಳ್ತೀನಿ. ಇದು ರಾಜಕೀಯ ಷಡ್ಯಂತ್ರ. ಇದನ್ನ ಹೆದರಿಸುವ ಶಕ್ತಿ ಇದೆ ಎಂದು ಹೇಳಿದ್ದಾರೆ.

Advertisement
Tags :
Advertisement