ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

60 ವರ್ಷ ಮೇಲ್ಪಟ್ಟವರು ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು: ಶರಣ್ ಪ್ರಕಾಶ್

60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್  ಸಲಹೆ ನೀಡಿದ್ದಾರೆ.
07:13 PM Jan 02, 2024 IST | Ashika S

ಬೆಂಗಳೂರು:   60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್  ಸಲಹೆ ನೀಡಿದ್ದಾರೆ.

Advertisement

ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಆಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ದತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ,ಆದರೂ ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ,  ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದರು.

ಮಾಸ್ಕ್‌ ಕಡ್ಡಾಯ ಎಂಬ ಆದೇಶ ಇಲ್ಲ: ಜನದಟ್ಟಣೆ ಮತ್ತಿತರ ಕಡೆ ಅಗತ್ಯ ಇರುವವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ಗಳನ್ನು ಧರಿಸುವುದು ಉತ್ತಮ. ಆದರೆ, ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಲೇಬೇಕೆಂಬ ಆದೇಶವನ್ನು ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು  ಸಚಿವರು ಸಲಹೆ ನೀಡಿದರು.

Advertisement
Tags :
LatetsNewsNewsKannadaಕೋವಿಡ್ಡಾ.ಶರಣ್ ಪ್ರಕಾಶ್ ಪಾಟೀಲ್ವಾಕ್ಸಿನ್ಸಲಹೆ
Advertisement
Next Article