ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಕಲಿ ಅಂಕಪಟ್ಟಿ ನೀಡಿ ನೌಕರಿ ಗಿಟ್ಟಿಸಿಕೊಂಡವರಿಗೆ ಶಿಕ್ಷೆ

ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗರ ಉದ್ಯೋಗ ಗಿಟ್ಟಿಸಿಕೊಂಡ ಆರೋಪ ಸಾಬೀತಾದ ಹಿನ್ನೆಲೆ 8 ಮಂದಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶ ಹೊನ್ನುಸ್ವಾಮಿ ಅವರು ಆದೇಶಿಸಿದ್ದಾರೆ.
05:44 PM Jan 07, 2024 IST | Ashika S

ಚಾಮರಾಜನಗರ: ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗರ ಉದ್ಯೋಗ ಗಿಟ್ಟಿಸಿಕೊಂಡ ಆರೋಪ ಸಾಬೀತಾದ ಹಿನ್ನೆಲೆ 8 ಮಂದಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶ ಹೊನ್ನುಸ್ವಾಮಿ ಅವರು ಆದೇಶಿಸಿದ್ದಾರೆ.

Advertisement

ಕೋಲಾರ ತಾಲೂಕಿನ ಸುನೀಲ್ ಕುಮಾರ್ (25), ಅರಸಿಕೆರೆ ತಾಲೂಕಿನ ಸಂತೋಷ್ ಕುಮಾರ್ (29), ಹಾಸನ ತಾಲೂಕಿನ ಎ ಬಿ ಶಂಕರ್ (39), ಮುಳಬಾಗಿಲು ತಾಲೂಕಿನ ಎಂ. ಷಣ್ಮುಗ (25), ನಾರಾಯಣಸ್ವಾಮಿ (25), ದೇವನಹಳ್ಳಿ ತಾಲೂಕಿನ ಶ್ರೀರಾಂ (27, ದೊಡ್ಡಬಳ್ಳಾಪುರ ತಾಲೂಕಿನ ಮುನಿರಾಜು (25), ಹೊಸಕೋಟೆ ತಾಲೂಕಿನ ಎಸ್ ಬಿ‌‌ ಸಿದ್ದಲಿಂಗಯ್ಯ (24) ಶಿಕ್ಷೆಗೊಳಗಾದವರು

2012ರಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇದ್ದ 46 ಗ್ರಾಮ ಲೆಕ್ಕಿಗ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ  ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಈ 8 ಮಂದಿ ಅಪರಾಧಿಗಳು ದೆಹಲಿ ಪಿಯು ಬೋರ್ಡ್ ಹಾಗೂ ಕರ್ನಾಟಕ ಶಿಕ್ಷಣ ಇಲಾಖೆಯ ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಉದ್ಯೋಗ ಪಡೆದುಕೊಂಡಿದ್ದರು.

Advertisement

ಬಳಿಕ 2013ರಲ್ಲಿ ಅಂಕಪಟ್ಟಿಗಳ ನೈಜತೆ ಪರಿಶೀಲನೆ ವೇಳೆ ನಕಲಿ ಎಂದು ತಿಳಿದು ಬಂದಿತ್ತು. ಈ ಸಂಬಂಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ 8 ಮಂದಿಯನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆಯು ಸಿಜೆಎಂ ನ್ಯಾಯಾಲಯದಲ್ಲಿ ನಡೆದಿತ್ತು. ಇದೀಗ ವಿಚಾರಣೆ ಪೂರ್ಣಗೊಂಡಿದ್ದು, ನಕಲಿ ಅಂಕಪಟ್ಟಿ ಕೊಟ್ಟು ವಂಚಿಸಿರುವುದು ಸಾಬೀತಾದ ಹಿನ್ನೆಲೆ 8 ಮಂದಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎ ಸಿ‌ ಮಹೇಶ್ ವಾದ ಮಂಡಿಸಿದ್ದರು.

Advertisement
Tags :
LatetsNewsNewsKannadaಅಂಕಪಟ್ಟಿಉದ್ಯೋಗಜೈಲು ಶಿಕ್ಷೆನಕಲಿನ್ಯಾಯಾಧೀಶಸತ್ರ ನ್ಯಾಯಾಲಯ
Advertisement
Next Article